ರಾಜ್ಯದಲ್ಲಿ 3,368 ಆಂಬ್ಯುಲೆನ್ಸ್ ​ಗಳಿಗೆ ಜಿಪಿಎಸ್​ ಅಳವಡಿಕೆ: ಹೈಕೋರ್ಟ್

ರಾಜ್ಯದಲ್ಲಿ 3,368 ಆಂಬ್ಯುಲೆನ್ಸ್ ​ಗಳಿಗೆ ಜಿಪಿಎಸ್​ ಅಳವಡಿಕೆ: ಹೈಕೋರ್ಟ್

ಆಂಬ್ಯುಲೆನ್ಸ್‌ಗಳ ತಡೆ ರಹಿತವಾಗಿ ಸಂಚಾರಕ್ಕೆ ಅನುವು ಮಾಡಿಕೊಡುವ ಹಿನ್ನೆಲೆಯಲ್ಲಿ ಈವರೆಗೂ ಒಟ್ಟು 3,368 ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ರಾಜ್ಯದಲ್ಲಿ ಖಾಸಗಿ ಹಾಗೂ ಸರ್ಕಾರಕ್ಕೆ ಸೇರಿದ 12,107 ಆಂಬ್ಯುಲೆನ್ಸ್‌ಗಳಿವೆ. ಅವುಗಳನ್ನು ಸರ್ಕಾರ ತಪಾಸಣೆ ನಡೆಸಿದಾಗ 3,368ಗಳಿಗೆ ಮಾತ್ರ ಜಿಪಿಎಸ್ ಅಳವಡಿಸಿರುವುದು ಕಂಡುಬದಿದೆ. ಉಳಿದ ಆಂಬ್ಯುಲೆನ್ಸ್‌ಗಳಿಗೂ ಜಿಪಿಎಸ್ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು.