ರಾಜ್ಯದಲ್ಲಿ 6 ಲಕ್ಷ ಮತದಾರರ ಹೆಸರು ಡಿಲೀಟ್
ಬೆಂಗಳೂರು: ಚಿಲುಮೆ ಸಂಸ್ಥೆಯ ವಿರುದ್ದ ಗಂಭೀರ ಆರೋಪಗಳು ಕೇಳಿ ಬಂದ ಬೆನ್ನಲ್ಲೇ BBMP ಮತದಾರರ ಪಟ್ಟಿ ಪರಿಷ್ಕರಣೆ ಮೇಲೆ ಅನುಮಾನ ವ್ಯಕ್ತವಾಗಿದ್ದು, ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿದೆ. 243 ವಾರ್ಡ್‌ಗಳ ಚುನಾವಣೆ ಸಂಬಂಧ BBMP ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿತ್ತು. ಅದರಲ್ಲಿ 6,69,652 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿದೆ. ಹಾಗಾಗಿ ಇದರ ಹಿಂದೆ ಚಿಲುಮೆ ಸಂಸ್ಥೆಯ ಕೈವಾಡ ಇದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.