ರಾಜ್ಯದಲ್ಲಿ BJP 150 ಸ್ಥಾನಗಳಲ್ಲಿ ಗೆಲ್ಲಲಿದೆ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ರಾಜ್ಯದಲ್ಲಿ BJP 150 ಸ್ಥಾನಗಳಲ್ಲಿ ಗೆಲ್ಲಲಿದೆ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ದಾಂಗುಡಿಯಿಟ್ಟಿದ್ದಾರೆ.

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ ಎಂದು ಬಿಜೆಪಿ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಶೀಘ್ರದಲ್ಲಿಯೇ ರಾಜ್ಯದಲ್ಲಿ ಬಿಜೆಪಿ ಬಸ್ ಯಾತ್ರೆ ಆರಂಭವಾಗಲಿದೆ ಎಂದರು.

ರಾಜ್ಯದಲ್ಲಿ ಬಿಜೆಪಿಯನ್ನು ಮತೆ ಅಧಿಕಾರಕ್ಕೆ ತರಲು ಎಲ್ಲಾ ರೀತಿಯ ತಯಾರಿ ನಡೆದಿದೆ. 150 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ಗುರಿ ಹೊಂದಿದೆ ಎಂದು ಹೇಳಿದರು.