ರಾಜ್ಯದಲ್ಲಿ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ : ಸಿಡಿಲಿಗೆ ಇಬ್ಬರು ಬಲಿ!

ರಾಜ್ಯದಲ್ಲಿ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ : ಸಿಡಿಲಿಗೆ ಇಬ್ಬರು ಬಲಿ!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಸಿಡಿಲಿಗೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಜ್ಯದ ರಾಮನಗರ, ರಾಯಚೂರು, ವಿಜಯಪುರ, ಕಲಬುರಗಿ, ಬೀದರ್, ಮಂಡ್ಯ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ.

ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಸೋನಾಳ ಗ್ರಾಮದಲ್ಲಿ ಸಿಡಿಲಿಗೆ ಲಹು ಮಾಧವರಾವ ಬೀರ್ಗೆ (36) ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮೆದಕಿನಾಳ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಬಿದ್ದು ಭೀರಪ್ಪ ಶಿವರಾಜ (2) ಸಾವನ್ನಪ್ಪಿದ್ದಾನೆ.

ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಬೇಸಿಗೆ ಕಾಲದ ಮಳೆಗೆ 4 ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ವಿವಿಧೆಡೆ ಮಳೆಗೆ ಸುಮಾರು 1,500 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆ ನಾಶವಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಮೆಣಸಿಕ ಕಾಯಿ, ಗೋಬಿ, ಬೀನ್ಸ್ ಸಸಿಗಳು ಆಲಿಕಲ್ಲು ಮಳೆಗೆ ಹಾನಿಯಾಗಿದ್ದು, ಅಂದಾಜು 80 ಲಕ್ಷ ರೂ.ಗಳ ನಷ್ಟ ಉಂಟಾಗಿದೆ