ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ - ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡು ತ್ತಿದ್ದೇವೆ. ಬಹುಶಃ ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುತ್ತದೆ ಎಂದು ಅಭದ್ರತೆ ಕಾಡುತ್ತಿದೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್ ನ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದರು.ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ: ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ಕೈಗೊಳ್ಳುವುದು, ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಮುಂತಾದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.