ರಾಜ್ಯದಲ್ಲಿ ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 30 ರ ಇಂದಿನಿಂದ ಏಪ್ರಿಲ್ 4 ರವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಕಲಬುರಗಿಯಲ್ಲಿ ನಿನ್ನೆ ಅತಿಹೆಚ್ಚು 39.7 ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ