ರಾಜ್ಯದಲ್ಲಿ ಇನ್ನೂ 6 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

ರಾಜ್ಯದಲ್ಲಿ ಇನ್ನೂ 6 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

ಬೆಂಗಳೂರು : ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಗಳ ಪರಿಣಾಮ ರಾಜ್ಯದಲ್ಲಿ ಇನ್ನೂ 6 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೀದರ್​, ಕಲಬುರಗಿ, ವಿಜಯಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನೂ 6 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ಕರಾವಳಿ ಹಾಗೂ ರಾಜ್ಯದ ರಾಜಧಾನಿ ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಭಾರೀ ಮಳೆಯಾಗಲಿದೆ. ಹೀಗಾಗಿ ಯಲ್ಲೋ ಅಲರ್ಟ್  ಘೋಷಿಸಲಾಗಿದೆ. ಇನ್ನೂ ಉತ್ತರ ಒಳನಾಡಿನಲ್ಲಿಯೂ ವರುಣ ಆರ್ಭಟಿಸಲಿದ್ದಾನೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.ವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.