ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ 136 ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ : ಡಿ.ಕೆ.ಶಿವಕುಮಾರ್ ವಿಶ್ವಾಸ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೆ ಬರುವುದು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ದಿನಗಳ ನಂತರ ಬಿಜೆಪಿ ಸರ್ಕಾರದಲ್ಲಿರುವುದಿಲ್ಲ, ತಾವು ಈಗಾಗಲೇ ಮೂರು ಬಾರಿ ಸಮೀಕ್ಷೆ ಮಾಡಿಸಿದ್ದು ಕಾಂಗ್ರೆಸ್ 160 ಸ್ಥಾನಗಳಲ್ಲಿ ಗೆಲ್ಲಬಹುದಾದ ಸೂಚನೆಗಳು ಸಿಕ್ಕಿದ್ದು, ಅದರಲ್ಲೂ 136 ಸ್ಥಾನಗಳನ್ನು ಖಚಿತವಾಗಿ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.
ರಣದೀಪ್ ಸಿಂಗ್ ಸುರ್ಜೇವಾಲ, ಡಾ.ಪರಮೇಶ್ವರ್ ಭೇಟಿ ವಿಚಾರಕ್ಕೆ ಸಂವಬಂಧಿಸಿದಂತೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು ವಿಚಾರವಾಗಿ ಇಬ್ಬರು ನಾಯಕರು ಭೇಟಿಯಾಗಿದ್ದಾರೆ.ಬೆಂಗಳೂರು ಟ್ರಾಫಿಕ್ ವಿಚಾರವಾಗಿ ಸುರ್ಜೇವಾಲ ಭೇಟಿಯಾಗಿದ್ದಾರೆ.ಈ ವೇಳೆ ಸಿಂಗಾಪುರಕ್ಕೆ ಒಂದು ತಂಡವನ್ನು ಕಳಿಸಲು ನಿರ್ಧಾರ ಮಾಡಿದ್ದೇವೆ. ಪರಮೇಶ್ವರ್ ನೇತೃತ್ವದಲ್ಲಿ ಒಂದು ತಂಡ ಸಿಂಗಾಪುರಕ್ಕೆ ಹೋಗಲಿದೆ ಎಂದರು.
ಪರಮೇಶ್ವರ್ ನೇತೃತ್ವದಲ್ಲಿ ಒಂದು ತಂಡ ಸಿಂಗಾಪುರಕ್ಕೆ ಹೋಗಲಿದೆ. ಅದರ ಬಗ್ಗೆ ಸುರ್ಜೇವಾಲ, ಡಾ.ಜಿ.ಪರಮೇಶ್ವರ್ ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಬಂದಿರುವ ಕಳಂಕ ತಪ್ಪಿಸುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ಇದೀಗ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಬಿಜೆಪಿ ವಿರುದ್ಧ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.