ರಾಜ್ಯದಲ್ಲಿ ಈ ಬಾರಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ರಾಜ್ಯದಲ್ಲಿ ಈ ಬಾರಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು : ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.

ಯಡಿಯೂರಪ್ಪ ನೇತೃತ್ವದಲ್ಲಿ ಈ ಬಾರಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ರಾಜ್ಯದ ಅಭಿವೃದ್ಧಿಗಾಗಿ ಐತಿಹಾಸಿಕ ಕೆಲಸಗಳಿಂದಾಗಿ ಸತತ ಎರಡನೇ ಬಾರಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.

ಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಮ್ಮ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಗಮನಿಸಿದರೆ, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.