ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ 20 ಲಕ್ಷ ರೂ.ವರೆಗೆ ಸಾಲ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ
ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರಿಗೆ ಶೇ.3 ರಷ್ಟು ಬಡ್ಡಿದರದಲ್ಲಿ 20 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ 3ರಷ್ಟು ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಏರಿಕೆ ಮಾಡಲಾಗುವುದು.
ಸರ್ಕಾರದ ಸಹಕಾರಿ ಬ್ಯಾಂಕ್ ಗಳಿಂದ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂಪಾಯಿಗಳ ಅಲ್ಪಾವಧಿಯ ಬೆಳೆ ಸಾಲವನ್ನು 5 ಲಕ್ಷ ರೂಪಾಯಿಗಳಿಗೆ ಮತ್ತು 10 ಲಕ್ಷ ರೂಪಾಯಿಗಳ ದೀರ್ಘಾವಧಿ ಸಾಲವನ್ನು ಶೇಕಡಾ 3 ರ ಬಡ್ಡಿದರದಲ್ಲಿ 20 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.