ರಾಜ್ಯದಲ್ಲಿ ಕೋವಿಡ್ ಲಸಿಕೆಯ ಕೊರತೆ ಇಲ್ಲ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಡೋಸ್ ಇದೆ. ಕೋವಿಶೀಲ್ಡ್, ಕೊವ್ಯಾಕ್ಸಿನ್, ನೇಸಲ್ ಲಸಿಕೆ ಇದೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮಾತನಾಡಿದ ಅವರು, ಇಂದು ಕೇಂದ್ರ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆ ಇದೆ. ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಸದ್ಯಕ್ಕೆ ಮಾಸ್ಕ್, ಕೋವಿಡ್ ಪಾಲನೆಗೆ ಸಲಗೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೆ ಕಠಿಣ ಕ್ರಮ ಜಾರಿ ಮಾಡುತ್ತೇವೆ ಎಂದಿದ್ದಾರೆ.