ರಾಜ್ಯದಲ್ಲಿ ತಾಪಮಾನ ಹೆಚ್ಚಳ : ಬಿಸಿಲಿನ ಬೇಗೆಗೆ ಜನರು ತತ್ತರ!

ಬೆಂಗಳೂರು : ರಾಜ್ಯದಲ್ಲಿ ಶಿವರಾತ್ರಿಗೂ ಮುನ್ನವೇ ಬೇಸಿಗೆ ಬೇಗೆ ಶುರುವಾಗಿದ್ದು, ವಾಡಿಕೆಗಿಂತ ಮುನ್ನವೇ ಬೇಸಿಗೆ ಆರಂಭವಾಗಿದೆ. ಬಿಸಿಲ ಬೇಗೆಗೆ ಜನರು ತತ್ತರಿಸಿದ್ದಾರೆ.
ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಡಿಕೇರಿಯಲ್ಲಿ ಗರಿಷ್ಠ 30 ಡಿಗ್ರಿ ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ