ರಾಜ್ಯದಲ್ಲಿ ಬಿಜೆಪಿ 125 ಸ್ಥಾನ ಗೆಲ್ಲುವುದು ನಿಶ್ಚಿತ : ಸಚಿವ ಸುಧಾಕರ್ ಭವಿಷ್ಯ

ರಾಜ್ಯದಲ್ಲಿ ಬಿಜೆಪಿ 125 ಸ್ಥಾನ ಗೆಲ್ಲುವುದು ನಿಶ್ಚಿತ : ಸಚಿವ ಸುಧಾಕರ್ ಭವಿಷ್ಯ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 125 ಸ್ಥಾನ ಗೆಲ್ಲುವುದು ನಿಶ್ಚಿತವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 80-90 ಸ್ಥಾನ ಮಾತ್ರ ಗೆಲ್ಲಲಿದೆ.

ಬಿಜೆಪಿ 125 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತ. ಚುನಾವಣೆ ಬಳಿಕ ಅನೇಕರು ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ. ಇಷ್ಟು ವರ್ಷ ಕಾಂಗ್ರೆಸ್ ನವರು ಹಣ, ತೋಳ್ಬಲದಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂದರು.

ಕಾಂಗ್ರೆಸ್ ನವರು ಭ್ರಷಾಷ್ಟಾಚಾರದ ಗಂಗೋತ್ರಿ ಇದ್ದಂತೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿದೆ. 2013, 2018 ರಲ್ಲಿ ಭಾರೀ ಅವ್ಯವಹಾರ ನಡೆದಿದೆ. 10 ಸಾವಿರ ಬೆಂಗಳೂರು ನಿವಾಸಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 900 ಎಕರೆಗೂ ಹೆಚ್ಚು ಭೂಮಿ ಡಿನೋಟಿಫೈಕೇಷನ್ ಮಾಡಿದ್ದಾರೆ. ಇದೇ ಕಾರಣಕ್ಕೆ ಲೋಕಾಯುಕ್ತ ಮುಚ್ಚಿ ಎಸಿಗೆ ರಚನೆ ಮಾಡಿದ್ದರು. ಸಿದ್ದರಾಮಯ್ಯ ಕಾಲದಲ್ಲಿ 35 ಸಾವಿರ ಕೋಟಿ ರೂ. ಅಧಿಕ ಭ್ರಷ್ಟಾಚಾರ ನಡೆದಿದೆ ಎಂದು ಸುಧಕಾರ್ ಆರೋಪಿಸಿದ್ದಾರೆ.