ರಾಜ್ಯದಲ್ಲಿ ಬಿಜೆಪಿ ಅರಾಜಕತೆ ಸೃಷ್ಟಿಸುತ್ತಿದೆ: ಎಸ್ ಡಿ ಪಿ ಐ

ರಾಜ್ಯದಲ್ಲಿ ಬಿಜೆಪಿ ಅರಾಜಕತೆ ಸೃಷ್ಟಿಸುತ್ತಿದೆ: ಎಸ್ ಡಿ ಪಿ ಐ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅರಾಜಕತೆ ಸೃಷ್ಟಿಮಾಡುತ್ತಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಎಸ್.ಡಿ.ಪಿ.ಐ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಹಲಾಲ್ ಮಾಂಸದ ಬಹಿಷ್ಕಾರದಲ್ಲಿ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿದರು. 

ಇದಲ್ಲದೇ ಟಿಪ್ಪುಸುಲ್ತಾನ್ ಸಾಧನೆಗಳನ್ನು ಪಠ್ಯಪುಸ್ತಕದಿಂದ ಕೈಬಿಡುವ ಸರಕಾರದ ನಡೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ತರುವ ಹುನ್ನಾರ  ಮಾಡಿದ್ದು ಎಷ್ಟರಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಸಮೀರ್ ಬೆಟಗೇರಿ, ಇಸ್ಮಿಲ್ ನಾಲಬಂದ, ಅಜಂ ಪಠಾಣ್ , ಮಹ್ಮದ್ ರಫೀಕ್, ಹಮಿದ ಬಂಗಾಲಿ ಸೇರಿದಂತೆ ಮುಂತಾದವರು ಇದ್ದರು.