ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ : ಸಿಎಂ ಬೊಮ್ಮಾಯಿ ಹೇಳಿಕೆ

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ : ಸಿಎಂ ಬೊಮ್ಮಾಯಿ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಬಹುಮತ ಪಡೆದು ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಜೆಪಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಹೋಗುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಯಾರೂ ಕೂಡ ಕಾಂಗ್ರೆಸ್ ಗೆ ಹೋಗುವುದಿಲ್ಲ. ಡಿ.ಕೆ.ಶಿವಕುಮಾರ್ ನಮ್ಮ ಪಕ್ಷದ ಕೆಲವರಿಗೆ ಕರೆ ಮಾಡಿ ಪಕ್ಷಕ್ಕೆ ಬರಲು ಆಹ್ವಾನ ನೀಡಿದ್ದಾರೆ. ಕಾಂಗ್ರೆಸ್ ನವರ ಸ್ಥಿತಿ ಹೇಗಿದೆ ಎಂದು ಅರ್ಥವಾಗುತ್ತದೆ ಎಂದರು.

ಇನ್ನು ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಮಾಡಿದ್ದಾರೆ.