ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 135 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ದೇಶದ ಜನ ಪ್ರಧಾನಿ ಮೋದಿ, ಬಿಜೆಪಿ ಪರವಾಗಿದ್ದಾರೆ. ಪಂಚರಾಜ್ಯಗಳ ಫಲಿತಾಂಶದಿಂದ ಇದು ಸಾಬೀತಾಗಿದೆ. ನಾವು ಕಾಂಗ್ರೆಸ್ ಮುಕ್ತ ದೇಶ ಮಾಡುತ್ತೇವೆ ಎಂದರು. ಅಧಿವೇಶನ ಮುಗಿದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುತ್ತೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದೇ ಬಿಟ್ಟೇವು ಎಂಬ ಭ್ರಮೆಯಲ್ಲಿದ್ದಾರೆ. ಆದರೆ ನೀವು ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.