ರಾಜ್ಯದಲ್ಲಿ ಮತ್ತೆ `ಲಾಕ್ ಡೌನ್' ಜಾರಿ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಹತ್ವದ ಮಾಹಿತಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ (Corona Virus) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಲಾಖ್ ಡೌನ್ (Lockdown ) ಜಾರಿ ಮಾಡುವ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Aaraga Gyanendra) ಮಹತ್ವದ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್ ಡೌನ್ ಮಾಡೋದು ಕೊನೆ ಅವಕಾಶ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಬಹಳ ವೇಗವಾಗಿ ಹಬ್ಬುತ್ತಿದೆ. ಲಾಕ್ ಡೌನ್ ಮಾಡಿದ್ರೆ ದೊಡ್ಡ ಹೊಡೆತ ಬೀಳಲಿದೆ. ಕಳೆದ ಬಾರಿ ಲಾಕ್ ಡೌನ್ ಮಾಡಿ ಆದ ಸಮಸ್ಯೆಗಳ ಬಗ್ಗೆ ಗೊತ್ತಿದೆ. ಈವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡುತ್ತಿವೆ ಎಂದರು.
ಇನ್ನು ಬೆಂಗಳೂರು ರಾಜ್ಯದಲ್ಲಿ ಕೊರೊನಾ ಹಾಟ್ ಸ್ಪಾಟ್ ಆಗುತ್ತಿದ್ದು, ಜನರು ಮುನ್ನೆಚ್ಚರಿಕೆಯಿಂದ ಇರಬೇಕು. ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ