ರಾಜ್ಯದಲ್ಲಿ ಮತ್ತೊಂದು ಪೋಕ್ಸೋ ಪ್ರಕರಣ : ದೈಹಿಕ ಶಿಕ್ಷಕನಿಂದ 13 ಸರ್ಕಾರಿ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ!

ಬೆಂಗಳೂರು : ರಾಜ್ಯದಲ್ಲಿ ಶಾಲಾ ಮಕ್ಕಳ ಮೇಲೆ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನಲ್ಲಿ 13 ಸರ್ಕಾರಿ ಶಾಲಾ ಬಾಲಕಿಯರ ಮೇಲೆ ದೈಹಿಕ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.
ಸರ್ಕಾರಿ ಶಾಲೆಯಲ್ಲಿ 13 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿ ದೈಹಿಕ ಶಿಕ್ಷಕ ಆಂಜಿನಪ್ಪ (50)ನನ್ನು ಪೋಕ್ಸೋ ಕಾಯ್ದೆಯಡಿ ಬೆಂಗಳೂರಿನ ಹೆಬ್ಬಾಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
8 ತಿಂಗಳ ಹಿಂದೆಯಷ್ಟೇ ಹೆಬ್ಬಾಳಕ್ಕೆ ವರ್ಗಾವಣೆಯಾಗಿದ್ದ ಅಂಜಿನಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಹೀಗಾಗಿ ಶಾಲಾ ಮುಖ್ಯ ಶಿಕ್ಷಕರಿಗೆ ದೂರು ನೀಡಲಾಗಿತ್ತು. ಸದ್ಯ 13 ಬಾಲಕಿಯರ ಹೇಳಿಕೆ ದಾಖಲಿಸಿರುವ ಪೊಲೀಸರು. ಈ ಹಿಂದೆ ಅಂಜಿನಪ್ಪ ಕಾರ್ಯನಿರ್ವಹಿಸಿದ್ದ ಶಾಲೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.