ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ವಿಸ್ತರಣೆ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು?
ಬೆಂಗಳೂರು : ನಾಳೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ನೇತೃತ್ವದಲ್ಲಿ ತಜ್ಞರು ಮತ್ತು ಸಚಿವರ ಜೊತೆಗೆ ಸಭೆ ನಡೆಯಲಿದ್ದು, ಸಭೆ ಬಳಿಕ ಎಲ್ಲವೂ ನಿರ್ಧಾರವಾಗಲಿದೆ ಎಂದು ಅರೋಗ್ಯ ಸಚಿವ ಡಾ.ಕೆ. ಸುಧಾಕರ್ (Minister Dr. K. Sudhakar) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಭೆ ಬಳಿಕ ಎಲ್ಲವೂ ನಿರ್ಧಾರವಾಗುತ್ತದೆ ಕಾದು ನೋಡಿ, ಜನರ ಆರೋಗ್ಯದ ದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಜನರಿಗೆ ತೊಂದರೆಕೊಡುವುದರಿಂದ ಯಾವುದೇ ಲಾಭವಿಲ್ಲ. ಕೊರೊನಾ ನಿಯಂತ್ರಣಕ್ಕೆ ಅನಿವಾರ್ಯವಾಗಿ ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಕೊರೊನಾ ಕೇಸ್ ಬರಬಹುದು. ಪರಿಸ್ಥಿತಿ ಸುಧಾರಿಸಿದರೂ ಸುಮಾರು 70 ಸಾವಿರ ಕೇಸ್ ಬರಬಹುದು ಎಂದು ಹೇಳಿದ್ದಾರೆ.