ರಾಜ್ಯದಲ್ಲಿ ವೈರಲ್ ಫಿವರ್ ಕಾಟ; ಡೆಂಗ್ಯೂ, ಮಲೇರಿಯಾ ಹಾವಳಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರೀತ್ಯದಿಂದ ವೈರಲ್ ಜ್ವರ, ಡೆಂಗ್ಯೂ, ಚಿಕುನ್ ಗುನ್ಯಾ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಉಲ್ಬಣಗೊಂಡಿವೆ. ಒಂದೇ ತಿಂಗಳಿನಲ್ಲಿ 930 ಡೆಂಗ್ಯೂ, 171 ಚಿಕುನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿರುವುದು ಆತಂಕ ಹುಟ್ಟಿಸಿದೆ. ಈ ಮಧ್ಯೆ 2 ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತಷ್ಟು ಭೀತಿ ಸೃಷ್ಟಿಸಿದೆ. ಚಳಿ & ಮಳೆಯ ವಾತಾವರಣದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವೈರಲ್ ಜ್ವರದ ಹಾವಳಿಗೆ ಜನರು ಕಂಗಾಲಾಗಿದ್ದಾರೆ.