ರಾಜ್ಯದಲ್ಲಿ ಶೀಘ್ರವೇ 570 `PDO' ನೇಮಕಾತಿಗೆ ಕ್ರಮ : ಸಚಿವ ಸಿ.ಸಿ.ಪಾಟೀಲ

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿಯ ಉಮಾನಾಥ ಕೊಟ್ಯಾನ ಅವರ ಪ್ರಶ್ನೆಗೆ ಸಿಎಂ ಪರವಾಗಿ ಉತ್ತರಿಸಿದ ಸಚಿವ ಸಿ.ಸಿ.ಪಾಟೀಲ, ಸುಗಮ ಆಡಳಿತದ ದೃಷ್ಟಿಯಿಂದ ರಾಜ್ಯದಲ್ಲಿ ಶೀಘ್ರವೇ 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಪಿಡಿಒಗಳು ಬಹಳ ಕಡಿಮೆ ಇದ್ದಾರೆ. ಹಾಗಾಗಿ ಒಬ್ಬೊರಿಗೊಬ್ಬರು 2-3 ಪಂಚಾಯಿತಿ ಜವಾಬ್ದಾರಿ ವಹಿಸಲಾಗಿದೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.