ರಾಜ್ಯದಲ್ಲಿ ಶೀಘ್ರವೇ ಕೋವಿಡ್‌ ಹೊಸ ಮಾರ್ಗಸೂಚಿ ಬಿಡುಗಡೆ: ಡಾ.ಕೆ.ಸುಧಾಕರ್‌

ರಾಜ್ಯದಲ್ಲಿ ಶೀಘ್ರವೇ ಕೋವಿಡ್‌ ಹೊಸ ಮಾರ್ಗಸೂಚಿ ಬಿಡುಗಡೆ: ಡಾ.ಕೆ.ಸುಧಾಕರ್‌

ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್‌ ಹಿನ್ನೆಲೆಯಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ. ರಾಜ್ಯದಲ್ಲಿ ಶೀಘ್ರವೇ ಕೋವಿಡ್‌ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.