ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು ಗೊತ್ತಾ?

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು ಗೊತ್ತಾ?

ನವದೆಹಲಿ : ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಬದಲಾವಣೆಯ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Union Minister Prahlad Joshi) ಪ್ರತಿಕ್ರಿಯೆ ನೀಡಿದ್ದು, ಸಿಎಂ ಬೊಮ್ಮಾಯಿ ಬದಲಾವಣೆಯ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2023 ರವರೆಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ಸಿಎಂ ಬದಲಾವಣೆ ಕುರಿತಂತೆ ಹೈಕಮಾಂಡ್ ಮಟ್ಟದಲ್ಲಿ ಪ್ರಸ್ತಾಪ ಆಗಿಲ್ಲ. ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದರು.ಸಿಎಂ ಬೊಮ್ಮಾಯಿ ಅವರು ಫಿಲಾಸಫಿಕಲ್ ಆಗಿ ಮಾತನಾಡಿದ್ದಾರೆ. ಈ ರೀತಿ ಹತ್ತು ಸಲ ಮಾತನಾಡಿರುವುದು ನಾನು ಕೇಳಿದ್ದೇನೆ. ಸಿಎಂ ಬೊಮ್ಮಾಯಿ ವಿದೇಶಕ್ಕೆ ಹೋಗುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.