ರಾಜ್ಯದಲ್ಲಿ ಹೆಚ್ಚುತ್ತಿದೆ ಚರ್ಮಗಂಟು ರೋಗದ ಹಾವಳಿ

ರಾಜ್ಯದಲ್ಲಿ ಹೆಚ್ಚುತ್ತಿದೆ ಚರ್ಮಗಂಟು ರೋಗದ ಹಾವಳಿ

ಬೆಂಗಳೂರು: ರಾಜ್ಯದಲ್ಲಿ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ ಸುಮಾರು 21,305 ಜಾನುವಾರುಗಳು ಬಲಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ 230 ತಾ|ಗಳ 15,977 ಗ್ರಾಮಗಳಲ್ಲಿ ಈವರೆಗೆ 2,37,194 ರಾಸುಗಳಿಗೆ ಚರ್ಮಗಂಟು ರೋಗ ಬಾಧಿಸಿದ್ದು, ಈ ಪೈಕಿ 1.64 ಲಕ್ಷ ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಕೆಲವು ಜಿಲ್ಲೆಗಳಲ್ಲಿ ಸಿಬ್ಬಂದಿ ಇಲ್ಲದೇ ಲಸಿಕೆ ತಲುಪುತ್ತಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.