ರಾಜ್ಯದಲ್ಲಿ ‘ಲವ್ ಜಿಹಾದ್ ನಿಷೇಧ’ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ ಮತಾಂತರ & ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಾಗಾಗಿ ಡಿ.19ರಿಂದ ಬೆಳಗಾವಿಯ ಸುವರ್ಣ ವಿಕಾಸಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.