ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಲೇಬೇಕು : ಸಚಿವ ಭೈರತಿ ಬಸವರಾಜ್

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಲೇಬೇಕು : ಸಚಿವ ಭೈರತಿ ಬಸವರಾಜ್

ಬೆಳಗಾವಿ : ರಾಜ್ಯದಲ್ಲಿ ಚರ್ಚೆ ಕಾರಣವಾಗಿರುವ ಮತಾಂತರ ನಿಷೇಧ ಕಾಯ್ದೆ ಕುರಿತಂತೆ ಸಚಿವ ಭೈರತಿ ಬಸವರಾಜ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಮತಾಂತರ ಕಾಯ್ದೆ ಜಾರಿಯಾಗಲೇಬೇಕು ಎಂದು ಸಚಿವ ಭೈರತಿ ಬಸವರಾಜ್ (Minister Bhairathi Basavaraja ) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಲೇ ಬೇಕು. ಕಾಂಗ್ರೆಸ್ ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ವಿರೋಧಿಸುತ್ತಿದ್ದಾರೆ. ಬಲವಂತವಾಗಿ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕಲೇಬೇಕು ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಮತಾಂತರ ನಿಷೇಧ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಮತಾಂತರ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಂಶವನ್ನು ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.