ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಕುರಿತ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮಾಹಿತಿ ನೀಡಿದರು, ಎನ್‌ಇಪಿ ಜಾರಿ ಕುರಿತಂತೆ ಈಗಾಗಲೇ ಸಿದ್ಧತೆಗಳು ನಡೆದಿವೆ, ಈ ಬಗ್ಗೆ ಯಾವ ತರಗತಿಯಿಂದ ಹೇಗೆ ಅನುಷ್ಠಾನ ಮಾಡಬೇಕೆಂದು ಟಾಸ್ಕ್ ಫೋರ್ಸ್ ತಜ್ಞರು ವರದಿ ನೀಡಲಿದ್ದು, ವರದಿ ಬಂದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂಥ ಹೇಳಿದರು.
ನೂತನ ಕಾಯ್ದೆ ಕೃಷಿ ಸೇರಿದಂತೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ನೀಡಲು ಹೊರಟಾಗ ಹಲವರು ವಿರೋಧಿಸಿದ್ದರು, ಆರಂಭದಲ್ಲಿ ಎಲ್ಲದಕ್ಕೂ ಇದ್ದೇ ಇರುತ್ತದೆ, ಹೀಗಾಗಿ ಓದದೇ ಅರ್ಥ ಮಾಡಿಕೊಳ್ಳದೇ ವಿರೋಧಿಸುವವರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ ಎಂದು ಸಚಿವರು ಹೇಳಿದರು.