ರಾಜ್ಯದ ಶಾಲಾ ಮಕ್ಕಳಿಗೆ `ಮೊಟ್ಟೆ' ನೀಡುವ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು ?

ಬಾಗಲಕೋಟೆ : ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಆಹಾರ ಪದ್ದತಿ ಅವರವರ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಪದ್ದತಿ ಅವರವರ ವೈಯಕ್ತಿಕ ವಿಚಾರ. ಹೀಗಾಗಿ ವಿದ್ಯಾರ್ಥಿಗಳ ಪೋಷಕರಿಗೇ ಆಯ್ಕೆಗೆ ಬಿಡಬೇಕು. ತಮ್ಮ ಮಕ್ಕಳಿಗೆ ಯಾವ ಆಹಾರ ಬೇಕೆಂಬುದನ್ನು ಪೋಷಕರೇ ಆಯ್ಕೆ ಮಾಡಲಿ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಶೋಭ ಕರಂದ್ಲಾಜೆ ಅವರು, ರಾಜ್ಯದಲ್ಲಿ ಮತಾಂತರಕ್ಕೆ ಕಾರಣ ಏನು ಎಂಬುದನ್ನು ಅಧ್ಯಯನ ಮಡಬೇಕು ಅಧ್ಯಯನ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನಾನು ಕೇಂದ್ರ ಸಚಿವೆಯಾಗಿ ಈ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.