ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ

ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ

ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕಟ್ಟಿಸುವ ಸರ್ಕಾರಿ ನೌಕರರಿಗೆ 'ಸಿಎಂ ಬಸವರಾಜ ಬೊಮ್ಮಾಯಿ 'ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರಿಗೆ ರಿಯಾಯಿತಿ ದರದಲ್ಲಿ ಮನೆ ಹಂಚಿಕೆ ಮಾಡಲು ಸಿಎಂ ಒಪ್ಪಿಗೆ ನೀಡಿದ್ದಾರೆ .

ಬೆಂಗಳೂರು ನಗರದಲ್ಲಿ ಅಪಾರ್ಟ್ ಮೆಂಟ್ ನಿರ್ಮಿಸಿ , ಸರ್ಕಾರಿ ನೌಕರರಿಗೆ ರಿಯಾಯಿತಿ ದರಲ್ಲಿ ಹಂಚಿಕೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಒಪ್ಪಿಗೆ ನೀಡಿರುತ್ತಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ತಿಳಿಸಿದ್ದಾರೆ.

ಈ ಮೂಲಕ ಬೆಂಗಳೂರು ನಗರದಲ್ಲಿ ಮನೆ ಕಟ್ಟುವ ಕನಸು ಹೊಂದಿದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ.