ಬೆಂಗಳೂರಿನಲ್ಲಿ 74 ನೇ ಗಣರಾಜ್ಯೋತ್ಸವ : ರಾಜ್ಯಪಾಲ ಗೆಹ್ಲೋಟ್ ಭಾಷಣದ ಮುಖ್ಯಾಂಶಗಳು

ಬೆಂಗಳೂರಿನಲ್ಲಿ 74 ನೇ ಗಣರಾಜ್ಯೋತ್ಸವ : ರಾಜ್ಯಪಾಲ ಗೆಹ್ಲೋಟ್ ಭಾಷಣದ ಮುಖ್ಯಾಂಶಗಳು

ಬೆಂಗಳೂರು : ಇಂದು ದೇಶಾದ್ಯಂತ 74 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಬೆಳಗ್ಗೆ 9 ಗಂಟಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳುರಿನ ಪರೇಡ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಿಎಂ ಬಸವರಾಝ ಬೊಮ್ಮಾಯಿ ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ರಾಜ್ಯಪಾಲರು ಗೌರವ ವಂದನೆ ಸ್ವೀಕಾರ ಮಾಡಿದರು.

ಬಳಿಕ ಮಾತನಾಡಿದ ರಾಜ್ಯಪಾಲರು, ರಾಜ್ಯದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದರು. ದೇಶದಲ್ಲಿ ಕರ್ನಾಟಕ ಪ್ರಗತಿಯಾಗುತ್ತಿರುವ ರಾಜ್ಯವಾಗಿದೆ. ರಾಜ್ಯದಲ್ಲಿ ಅಮೃತ್ ಯೋಜನೆಗಳು ಯಶಸ್ವಿಯಾಗಿವೆ. ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಒತ್ತು ನೀಡಿದೆ ಎಂದರು.

ರಾಜ್ಯ ಸರ್ಕಾರ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ರೈತರ ಏಳಿಗೆಗೆ ಶ್ರಮ ವಹಿಸುತ್ತಿದೆ. ಮನೆಗ್ರಾ ಯೋಜನೆಗೆ ಹೆಚ್ಚು ಒತ್ತು ನೀಡುತ್ತಿದೆ. ಬಡವರು, ದಲಿತರು, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದೆ, ನವಭಾರತ ನಿರ್ಮಾಣಕ್ಕೆ ನವ ಕರ್ನಾಟಕ ಧೇಯದೊಂದಿಗೆ ಗಣರಾಜ್ಯೋತ್ಸವ ಆಚರಿಸಬೇಕು. ದೇಶದ ಸ್ವಾತಂತ್ರ್ಯ ಅಮೃತ ಶಾಲೆಗಳ ಅಭಿವೃದ್ಧಿಗೆ ಕ್ರಮ.

ನಮ್ಮ ಕ್ಲಿನಿಕ್, ಮಹಿಳಾ ಕಲ್ಯಾಣ ಕೇಂದ್ರ ಸ್ಥಾಪನೆಗೆ ಒತ್ತು ನೀಡಲಾಗಿದೆ. ಆರೋಗ್ಯ ಕರ್ನಾಟಕ ಕಾರ್ಯಕ್ರಮದಿಂದ ಬಿಪಿಎಲ್ ಕಾರ್ಡ್ ದಾರರಿಗೆ ತುಂಬಾ ಅನುಕೂಲವಾಗುತ್ತಿದೆ. ಸಣ್ಣ, ಮಧ್ಯಮ ನೀರಾವರಿದಾರರಿಗೆ ವಿಶೇಷ ಯೋಜನೆ ರೂಪಿಸಲಾಗಿದೆ ಎಂದರು.

ಕಾರ್ಮಿಕರ ಖಾತೆಗೆ 4,1110 ಕೋಟಿ ನೆರವಾಗಿ ಜಮಾ ಮಾಡಲಾಗಿದೆ. 2022 ರಲ್ಲಿ 13.35 ಲಕ್ಷ ಮನೆಗಳಿಗೆ ಮೂಲಸೌಕರ್ಯ ಕಲ್ಪಿಸಲಾಗಿದೆ. ಇದಕ್ಕಾಗಿ 2314.34 ಕೋಟಿ ವೆಚ್ಚ ಮಾಡಲಾಗಿದೆ. ಕರ್ನಾಟಕ ಗ್ರಾಮಗಳ ಘೋಷಣೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. 2022-23 ನೇ ಸಾಲಿನಲ್ಲಿ 10.19 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ ಮಾಡಲಾಗಿದೆ. 15,066 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ ಎಂದರು.