ರಾಜ್ಯವನ್ನು 'ATM' ಮಾಡಿ ಲೂಟಿ ಹೊಡೆಯಲು ಕಾಂಗ್ರೆಸ್ ಹವಣಿಸುತ್ತಿದೆ : ಟ್ವೀಟ್ ನಲ್ಲಿ ಬಿಜೆಪಿ ಕಿಡಿ

ಬೆಂಗಳೂರು : ರಾಜ್ಯವನ್ನು ಎಟಿಎಮ್ ಆಗಿ ಮಾಡಿಕೊಂಡು ಲೂಟಿ ಹೊಡೆಯಲು ಕಾಂಗ್ರೆಸ್ ಹವಣಿಸುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ರಾಜ್ಯಾಧ್ಯಕ್ಷರಿಂದ ಹಿಡಿದು ಯುವ ಕಾಂಗ್ರೆಸ್ ಅಧ್ಯಕ್ಷರವರೆಗೂ ಬೇಲ್ ಮೇಲೆ ಬಾಳು ಸಾಗಿಸುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪಕ್ಕದ ರಾಜ್ಯದಿಂದ ನಾಯಕರನ್ನು ಆಮದು ಮಾಡಿಕೊಂಡು ಅವರಿಂದಲೂ ರಾಜ್ಯವನ್ನು ಲೂಟಿ ಹೊಡೆಸಿ ಗೃಹಮಂತ್ರಿಗಳನ್ನಾಗಿಯೂ ಮಾಡಿದ್ದರು.
ರಾಜ್ಯಾಧ್ಯಕ್ಷರಿಂದ ಹಿಡಿದು ಯುವ ಕಾಂಗ್ರೆಸ್ ಅಧ್ಯಕ್ಷರವರೆಗೂ ಬೇಲ್ ಮೇಲೆ ಬಾಳು ಸಾಗಿಸುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪಕ್ಕದ ರಾಜ್ಯದಿಂದ ನಾಯಕರನ್ನು ಆಮದು ಮಾಡಿಕೊಂಡು ಅವರಿಂದಲೂ ರಾಜ್ಯವನ್ನು ಲೂಟಿ ಹೊಡೆಸಿ ಗೃಹಮಂತ್ರಿಗಳನ್ನಾಗಿಯೂ ಮಾಡಿದ್ದರು ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಡಬಲ್ ಎಂಜಿನ್ ವೇಗದ ಅಭಿವೃದ್ಧಿಯನ್ನು ರಾಜ್ಯಕ್ಕೆ ನೀಡಲು ತಲೆ ಕೆಳಗಾಗಿ ನಿಂತರೂ ಸಾಧ್ಯವಾಗದ ಯಾವ ಮಟ್ಟಕ್ಕಾದರೂ ಇಳಿದು ಅಧಿಕಾರಕ್ಕೆ ಬಂದು ರಾಜ್ಯವನ್ನು ಎಟಿಎಮ್ ಆಗಿ ಮಾಡಿಕೊಂಡು ಲೂಟಿ ಹೊಡೆಯಲು ಹವಣಿಸುತ್ತಿದೆ. ಕನ್ನಡಿಗರು ಇದನ್ನು ಎಂದಿಗೂ ಸಾಧ್ಯವಾಗಿಸುವುದಿಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.