ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವಡೆ ಕೊಚ್ಚಿ ಹೋದ ರಸ್ತೆಗಳು, ಜನಜೀವನ ಅಸ್ತವ್ಯಸ್ತ

ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವಡೆ ಕೊಚ್ಚಿ ಹೋದ ರಸ್ತೆಗಳು, ಜನಜೀವನ ಅಸ್ತವ್ಯಸ್ತ

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಹಲವೆಡೆ ರಸ್ತೆ ಸಂಪರ್ಕ ಬಂದ್ ಆಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ರಾತ್ರಿಯಿಂದ ಬೆಂಗಳೂರು, ಮಂಡ್ಯ, ತುಮ

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನಕ್ಕೆ ಬೆಂಗಳೂರಿನ 8 ವಲಯಗಳಲ್ಲಿ ಭಾರೀ ಮಳೆಯಾಗಿದ್ದು, ಯಲಹಂಕ 75.5 ಮಿ.ಮೀ, ಅಟ್ಟೂರು 70 ಮಿ.ಮೀ, ಚೌಡೇಶ್ವರಿ ವಾರ್ಡ್ 67.5 ಮಿ.ಮೀ, ಆರ್.ಆರ್.ನಗರ 66.5 ಮಿ.ಮೀ, ಸಂಪಗಿರಾಮನಗರದಲ್ಲಿ 66 ಮಿ.ಮೀ ಮಳೆ ಆಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜಾಲಹಳ್ಳಿ-ಇಡಗೂರು ಗ್ರಾಮದ ಮಧ್ಯೆ ಬೈಕ್​​ನಲ್ಲಿ ಸೇತುವೆ ದಾಟುವಾಗ ಸವಾರರು ಕೊಚ್ಚಿಹೋದ ಘಟನೆ ನಡೆದಿದೆ. ಸ್ಥಳೀಯರ ಸಹಾಯದಿಂದ ಓರ್ವನ ರಕ್ಷಣೆ ಮಾಡಲಾಗಿದ್ದು ಮತ್ತೋರ್ವ ಮೃತಪಟ್ಟಿದ್ದಾನೆ.

ತುಮಕೂರು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಡುತ್ತಿದ್ದಾರೆ.ಮಳೆಯ ನೀರಿನ ರಭಸಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಶಿರಾ ರಸ್ತೆ ಕೊಚ್ಚಿ ಹೋಗಿದೆ. ವಾಹನ ಸವಾರರು ಪರದಾಡುವಂತಾಗಿದೆ.

ದಾವಣಗೆರೆ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ದಾವಣಗೆರೆ ತಾಲೂಕಿನ ಅಣಜಿ ಕೆರೆಗೆ ನೀರು ಹೆಚ್ಚಾದ ಹಿನ್ನೆಲೆ ದಾವಣಗೆರೆ-ಜಗಳೂರು ರಾಜ್ಯ ಹೆದ್ದಾರಿ‌ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಬೀಳಗಿ ಪಟ್ಟಣದ ಕಾಟಕರ ಓಣಿ, ಸುಳಿಬಾವಿ ಓಣಿ, ದೇಸಾಯಿ ಗಲ್ಲಿಯಲ್ಲಿ ಮಳೆಯಿಂದ 10 ಮನೆಗಳಿಗೆ ಹಾನಿಯಾಗಿದೆ. ಮಣ್ಣಿನ ಮನೆಗಳು ಕುಸಿದಿವೆ.

ಕೂರು, ದಾವಣಗೆರೆಗೆ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.