ರಾಮನಗರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ; ಮನೆ, ಸರಗಳ್ಳತನ ಮಾಡುತ್ತಿದ್ದ ನಾಲ್ವರು ಅರೆಸ್ಟ್

ರಾಮನಗರ: ರಾಮನಗರ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮನೆ ಮತ್ತು ಸರಗಳ್ಳತನ ಮಾಡುತ್ತಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ.
ರಾಮನಗರ ತಾಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಬಳಿ ಹೋಗುತ್ತಿದ್ದ ಐವರು ಮಹಿಳೆಯರಲ್ಲಿ ಪ್ರೇಮಾ ಹಾಗೂ ಚನ್ನಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಬೈಕ್ನಲ್ಲಿ ಪರಾರಿಯಾಗಿದ್ದರು.