ರಾಯಚೂರಿನಲ್ಲಿ ಐದು ವರ್ಷದ ಬಾಲಕಿಗೆ 'ಝಿಕಾ ವೈರಸ್' ಪತ್ತೆ

ರಾಯಚೂರು: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಮಾನವಿ ತಾ| ಕೋಳಿ ಕ್ಯಾಂಪ್ನಲ್ಲಿ ಈ ವೈರಸ್ ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಬಾಲಕಿಗೆ ಅನಾರೋಗ್ಯ ಉಂಟಾಗಿತ್ತು. ಈ ವೇಳೆ, ಪೋಷಕರು ವೈದ್ಯರಲ್ಲಿ ಚಿಕಿತ್ಸೆಗಾಗಿ ತೋರಿಸಿದ್ದರು. ಈ ವೇಳೆ, ಬಾಲಕಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಆಕೆ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿಯಾಗಿದೆ.