ರಾಷ್ಟ್ರೀಯ ಯುವ ದಿನ l ಪ್ರಧಾನಿ ಕಾರ್ಯಕ್ರಮ ಯಶಸ್ವಿ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಜಿಲ್ಲೆಯ ರೈಲ್ವೆ ಮೈದಾನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವಜನೋತ್ಸವಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಯುವಸಮೂಹವನ್ನು ಉದ್ದೇಶಿಸಿ ಮಾತನಾಡಿದರು. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಹುಬ್ಬಳ್ಳಿಯಲ್ಲಿ ಪ್ರಧಾನಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಇದೊಂದು ಐತಿಹಾಸಿಕ ದಾಖಲೆ. ಧಾರವಾಡ ಜಿಲ್ಲೆಯ ಜನರಿಗೆ ಧನ್ಯವಾದ. ಭದ್ರತಾಲೋಪ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.