ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯರು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯ ಮಾಡಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯರು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯ ಮಾಡಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಧಾರವಾಡ (ಕರ್ನಾಟಕ ವಾರ್ತೆ)ಜ.05: ರಾಷ್ಟ್ರೀಯ ಯುವಜನೋತ್ಸವ ನಮ್ಮ ಜಿಲ್ಲೆಯಲ್ಲಿ ಜರುಗುತ್ತಿರುವುದು ನಮ್ಮ ಹೆಮ್ಮೆ. ಪ್ರತಿಯೊಂದು ಕೆಲಸಗಳು ಅಚ್ಚುಕಟ್ಟಾಗಿ ಮಾಡಲು ವಿವಿಧ ಸಮಿತಿಗಳು ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಯುವಜನೋತ್ಸವ ಸಮಿತಿಗಳ ಕಾರ್ಯಪ್ರಗತಿ ಪರಿಶೀಲನೆ ಮಾಡಿ, ಮಾತನಾಡಿದಈಗಾಗಲೇ ಆನ್‍ಲೈನ್ ಮೂಲಕ ಎರಡು ಸಾವಿರಕ್ಕೂ ಹೆಚ್ಚು ಜನ ಯುವಜನೋತ್ಸವ ಸ್ಪರ್ಧಾಳುಗಳು ತಮ್ಮ ಹೆಸರು ನೋಂದಾಯಿಸಿದ್ದಾರೆ. ವಿವಿಧ ಭಾμÉ, ಸಂಸ್ಕøತಿ ಮತ್ತು ವಿಭಿನ್ನ ಸಾಮಾಜಿಕ ಹಿನ್ನಲೆ ಇರುವ ಉತ್ಕೃಷ್ಟ ಯುವ ಕಲಾವಿದರು ದೇಶದ ಬೇರೆ ಬೇರೆ ಭಾಗಗಳಿಂದ ನಮ್ಮ ಜಿಲ್ಲೆಗೆ ಆಗಮಿಸುತ್ತಿದ್ದಾರೆ.ಅವರಿಗೆ ಊಟ, ವಸತಿ, ಸಾರಿಗೆ ಸೇರಿದಂತೆ ಯಾವುದರಲ್ಲೂ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು. ಸಮಿತಿ ಸದಸ್ಯರು ತಮ್ಮ ಸಮಿತಿಗೆ ನೀಡಿದ ಕಾರ್ಯಗಳನ್ನು ವಿಳಂಬವಿಲ್ಲದೆ, ಲೋಪವಾಗದಂತೆ ನಿರ್ವಹಿಸಬೇಕು.ಅತಿಥಿಗಳು ಜನವರಿ 9 ರಿಂದಲೇ ಜಿಲ್ಲೆಗೆ ಆಗಮಿಸಲು ಆರಂಭಿಸುತ್ತಾರೆ. ಆದ್ದರಿಂದ ಎಲ್ಲ ಸಮಿತಿಗಳು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ, ಆದಷ್ಟು ಬೇಗ ತಮ್ಮ ಜವಾಬ್ದರಿಗಳನ್ನು ಪೂರ್ಣಗೊಳಿಸಬೇಕೆಂದು ಅವರು ಹೇಳಿದರು.ಜಿಲ್ಲಾ ಪಂಚಾಯತ ಸಿಇಓ ಅವರು ಮಾತನಾಡಿ, ಆಹಾರ ಹಾಗೂ ವಸತಿ ವ್ಯವಸ್ಥೆ ಅತ್ಯಂತ ಶಿಸ್ತಿನಿಂದ ಮಾಡಲಾಗಿದೆ. ಅಗತ್ಯ ಸಿಬ್ಬಂದಿ ಮತ್ತು ಸ್ವಯಂ ಸೇವಕರನ್ನು ನೇಮಿಸಲಾಗಿದೆ. ಕರ್ನಾಟಕದ ಮತ್ತು ವಿಶೇಷವಾಗಿ ಉತ್ತರ ಕರ್ನಾಟಕದ ಊಟದ ಮೆನ್ಯುಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲೋಕೇಶ್ ಜಗಲಾಸರ್ ಮಾತನಾಡಿ, ವೇದಿಕೆ ಮತ್ತು ಸ್ಟಾಲ್‍ಗಳ ನಿರ್ಮಾಣ ಕಾರ್ಯ ಶೀಘ್ರವಾಗಿ ಆರಂಭಿಸಲಾಗುವುದು. ಗುತ್ತಿಗೆದಾರರು ಶೀಘ್ರವಾಗಿ ಸ್ಪಂದಿಸಬೇಕು ಎಂದರು.ಸಭೆಯಲ್ಲಿ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡು ತಮ್ಮ ಸಮಿತಿಗಳ ಕಾರ್ಯ ಪ್ರಗತಿ ವರದಿ ಸಲ್ಲಿಸಿದರು.