ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ವರದಿಗಳ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದು ಹೀಗೆ

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ವರದಿಗಳ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದು ಹೀಗೆ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕಾಂಗ್ರೆಸ್ ಯೋಜನೆ ವರದಿಗಳು ವಿಶ್ವಸಂಸ್ಥೆಗೆ ತಿಳಿದಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ವಕ್ತಾರರು ಹೇಳಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕಾಂಗ್ರೆಸ್ ಯೋಜನೆ ವರದಿಗಳು ವಿಶ್ವಸಂಸ್ಥೆಗೆ ತಿಳಿದಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ವಕ್ತಾರರು ಹೇಳಿದ್ದಾರೆ.
ಭಾರತದ ಪ್ರಜಾಪ್ರಭುತ್ವದ ಬಗ್ಗೆ ಗುಟೆರಸ್ಗೆ ಆತಂಕವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯ ಉಪ ವಕ್ತಾರ ಫರ್ಹಾನ್ ಹಕ್, ರಾಹುಲ್ ಗಾಂಧಿ ಪ್ರಕರಣಕ್ಕೆ ಸಂಬಂಧಿಸಿದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಮೇಲ್ಮನವಿ ಸಲ್ಲಿಸುವ ಅವರ ಪಕ್ಷದ ನಿರ್ಧಾರವನ್ನು ಅರ್ಥಮಾಡಿಕೊಂಡಿದ್ದೇವೆ ಎಂದರು.2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿ 52 ವರ್ಷದ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದ್ದು, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ. ನಂತರ ಮಹಾತ್ಮ ಗಾಂಧಿ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ, "ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅಹಿಂಸೆ, ಅದನ್ನು ಪಡೆಯುವ ಸಾಧನವಾಗಿದೆ ಎಂದು ಹೇಳಿದ್ದರು.