ರಾಹುಲ್‌ ಗಾಂಧಿ ವಿರುದ್ಧ ಕ್ರಮ ಅಗತ್ಯ: ಏಕನಾಥ ಶಿಂಧೆ

ರಾಹುಲ್‌ ಗಾಂಧಿ ವಿರುದ್ಧ ಕ್ರಮ ಅಗತ್ಯ: ಏಕನಾಥ ಶಿಂಧೆ

ಮುಂಬೈ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್‌ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್‌ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಒತ್ತಾಯಿಸಿದ್ದಾರೆ.

ಮುಂಬೈನಲ್ಲಿ ಮಾತನಾಡಿದ ಅವರು, ಸಾವರ್ಕರ್‌ ಕೇವಲ ಮಹಾರಾಷ್ಟ್ರಕ್ಕೆ ಸೀಮಿತರಲ್ಲ.

ಅವರು ಇಡೀ ರಾಷ್ಟ್ರಕ್ಕೆ ನಾಯಕರು. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವಿತಾವಧಿಯ ಬಹುತೇಕ ಅವಧಿಯನ್ನು ಜೈಲಿನಲ್ಲಿ ಕಳೆದಿದ್ದಾರೆ. ಅಂಥ ದೇಶಭಕ್ತರನ್ನು ಅವಮಾನಿಸಿದ ರಾಹುಲ್‌ ಗಾಂಧಿ ಶಿಕ್ಷೆಗೆ ಅರ್ಹರು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ ರಾಹುಲ್‌ ಕೇವಲ ಒಬ್ಬ ವ್ಯಕ್ತಿಯನ್ನು ಅವಮಾನಿಸಿಲ್ಲ, ಬದಲಾಗಿ ಒಬಿಸಿ ಸಮುದಾಯವನ್ನೇ ಅವಮಾನಿಸಿದ್ದಾರೆ. ಇದೇ ರೀತಿ ಮಾತನಾಡುವುದನ್ನು ಅವರು ಮುಂದುವರಿಸಿದರೆ ರಸ್ತೆಯಲ್ಲಿ ನಡೆದಾಡಲೂ ಅವರಿಗೆ ಕಷ್ಟವಾಗಬಹುದು,’ ಎಂದು ಎಚ್ಚರಿಸಿದರು.

ಮತ್ತೊಂದು ಕೇಸು?
ಮತ್ತೂಂದೆಡೆ, ವೀರ ಸಾವರ್ಕರ್‌ ಕುರಿತ ಹೇಳಿಕೆ ಹಿನ್ನೆಲೆಯಲ್ಲಿ ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಚಿಂತನೆಯಲ್ಲಿ ಶಿವಸೇನೆಯ ಏಕನಾಥ ಶಿಂಧೆ ಬಣ ಚಿಂತನೆ ನಡೆಸಿದೆ.