ಕರ್ನಾಟಕದ ಅಳಿಯ, ಯುಕೆ ಪ್ರಧಾನಿ ʻರಿಷಿ ಸುನಕ್ʼರನ್ನು ಭೇಟಿಯಾದ ಪ್ರಧಾನಿ ʻಮೋದಿʼ

ಕರ್ನಾಟಕದ ಅಳಿಯ, ಯುಕೆ ಪ್ರಧಾನಿ ʻರಿಷಿ ಸುನಕ್ʼರನ್ನು ಭೇಟಿಯಾದ ಪ್ರಧಾನಿ ʻಮೋದಿʼ

ಬಾಲಿ(ಇಂಡೋನೇಷಿಯಾ): ಬಾಲಿಯಲ್ಲಿ ನಡೆಯುತ್ತಿರುವ G20 ಶೃಂಗಸಭೆಯಲ್ಲಿ ಕರ್ನಾಟಕದ ಅಳಿಯ, ಯುಕೆ ಪ್ರಧಾನಿ ರಿಷಿ ಸುನಕ್(Rishi Sunak)ಅವರನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಅನೌಪಚಾರಿಕ ಸಂವಾದ ನಡೆಸಿದರು ಮತ್ತು ಹಲವಾರು ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಕಳೆದ ತಿಂಗಳು ಯುಕೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಸುನಕ್ ಅವರನ್ನು ಮೋದಿ ಮೊದಲ ಬಾರಿಗೆ ಭೇಟಿಯಾಗಿದ್ದಾರೆ. 

ಭಾರತವು ಡಿಸೆಂಬರ್ 1, 2022 ರಿಂದ ಒಂದು ವರ್ಷದವರೆಗೆ G20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ. G20 ಶೃಂಗವು ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ದಕ್ಷಿಣ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, UK, USA ಮತ್ತು ಯುರೋಪಿಯನ್ ಯೂನಿಯನ್ (EU) ಹೀಗೆ 19 ದೇಶಗಳನ್ನು ಒಳಗೊಂಡಿದೆ.