ರೇಷನ್ ಕಾರ್ಡ್ ನಲ್ಲಿ ಹೊಸ ಕುಟುಂಬ ಸದಸ್ಯರ ಹೆಸರು ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಬೆಂಗಳೂರು : ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡಬಹುದಾಗಿದೆ.
ಕರ್ನಾಟಕ ಪಡಿತರ ಚೀಟಿ ( Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.
ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು ?
1. ರೇಷನ್ ಕಾರ್ಡ್ಗೆ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಕುಟುಂಬದ ಯಜಮಾನರ ಬಳಿ ರೇಷನ್ ಕಾರ್ಡ್ ಹಾಗೂ ಅದರ ಜೆರಾಕ್ಸ್ ಪ್ರತಿ
2. ಮಗುವಿನ ಅಥವಾ ಕುಟುಂಬದ ಹೊಸ ಸದಸ್ಯರ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್
3. ಮಗುವಾಗಿದಲ್ಲಿ ಪೋಷಕರ ಆಧಾರ್ ಕಾರ್ಡ್.
4. ಹೊಸ ವಿವಾಹಿತ ಮಹಿಳೆಯಾಗಿದ್ದರೆ ಆಧಾರ್ ಕಾರ್ಡ್, ವಿವಾಹ ಪ್ರಮಾಣಪತ್ರ, ತನ್ನ ಪೋಷಕರ ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.
ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.
ರೇಷನ್ ಕಾರ್ಡ್ ನಲ್ಲಿ ಹೊಸ ಕುಟುಂಬ ಸದಸ್ಯರ ಹೆಸರು ಸೇರ್ಪಡೆ ಮಾಡಲು ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ
- kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
- ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ .
- ಹೋಮ್ ಪೇಜ್‌ನಲ್ಲಿರುವ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವ ಆಯ್ಕೆ ಒತ್ತಿ .
- ಹೊಸ ಫಾರ್ಮ್ ತೆರೆಯಲಿದೆ, ಹೊಸ ಕುಟುಂಬ ಸದಸ್ಯರ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿಕೊಳ್ಳಿ
- ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
- ಈ ಜಾಲತಾಣದಲ್ಲಿ ದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ
- ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆಗಾಗಿ ಅರ್ಜಿಯನ್ನು ಸಲ್ಲಿಸಿ