ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಜ.31 ಕ್ಕೆ ಸಿಎಂ ಬೊಮ್ಮಾಯಿರಿಂದ `ರೈತ ಶಕ್ತಿ' ಯೋಜನೆಗೆ ಚಾಲನೆ
ಚಿತ್ರದುರ್ಗ : ಜನವರಿ 31 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಗರಿಷ್ಠ 5 ಎಕರೆಗೆ ಡೀಸಲ್ ಗೆ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ 74ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಸ್ವಾಮಿ ವಿವೇಕಾನಂದ ಯುವ ಸಾಮಥ್ರ್ಯ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತ್‍ನ ಯುವ ಸಂಘಗಳಿಗೆ ತಲಾ 05 ಲಕ್ಷ ರೂ. ಪ್ರೋತ್ಸಾಹಧನ ನೀಡುವ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಇದೇ ಜ. 31 ರಂದು ಮುಖ್ಯಮಂತ್ರಿಗಳು ರೈತಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಗರಿಷ್ಠ 5 ಎಕರೆವರೆಗೆ ರೈತರು ಬಳಸುವ ಡೀಸೆಲ್‍ಗೆ ಸಹಾಯಧನ ಒದಗಿಸಲಾಗುವುದು ಎಂದರು.
ಚಿತ್ರದುರ್ಗ ಐತಿಹಾಸಿಕ ನಗರ, ವೀರಮದಕರಿ ಆಳಿದ ನಾಡು. ಇಲ್ಲಿನ ಒನಕೆ ಓಬವ್ವ ನಾಡಿಗೆ ಮಾದರಿಯಾಗಿದ್ದಾಳೆ. ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುತ್ತಿದ್ದು, ಕೋವಿಡ್‍ನಂತಹ ಮಹಾಮಾರಿಯಿಂದಾಗಿ ನಮ್ಮ ದೇಶ ಸವಾಲು ಎದುರಿಸಬೇಕಾಯಿತು. ಆದರೆ, ಇಂದು ಜಗತ್ತಿನ 5ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ಶೀಘ್ರದಲ್ಲಿಯೇ ನಮ್ಮ ಆರ್ಥಿಕ ಪ್ರಗತಿ ವಿಶ್ವದಲ್ಲೇ 03 ನೇ ಸ್ಥಾನಕ್ಕೆ ಏರಲಿದೆ. ಕೋವಿಡ್ ಮಹಾಮಾರಿಗೆ ದೇಶದಲ್ಲಿ ಲಸಿಕೆ ಕಂಡುಹಿಡಿದು, ಹೊರದೇಶಗಳಿಗೂ ಲಸಿಕೆ ಸರಬಾರಾಜು ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿ ಹೊಂದುತ್ತಿದ್ದು ಭದ್ರಾ ಮೇಲ್ದಂಡೆ ಯೋಜನೆ, ವೈದ್ಯಕೀಯ ವಿಜ್ಞಾನ ಕಾಲೇಜು, ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಯೋಜನೆ ಜಾರಿ ಗೊಳಿಸಲಾಗುತ್ತಿದೆ. ಸರ್ಕಾರದಿಂದ ರೈತರಿಗಾಗಿ ಹಲವು ಯೋಜನೆ ಹಾಕಿಕೊಳ್ಳಲಾಗಿದೆ. ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಕೃಷಿ ವಿ.ವಿ ಗಳಲ್ಲಿ ರೈತರ ಮಕ್ಕಳಿಗೆ ಶೇ.50 ರಷ್ಟು ಸ್ಥಾನ ಮೀಸಲಿಡಲಾಗಿದೆ. ಹೆಣ್ಣು ಮಕ್ಕಳಿಗಾಗಿ ಸ್ತ್ರೀಸಾಮಥ್ರ್ಯ ಯೋಜನೆ ಜಾರಿಗೆ ಬರಲಿದ್ದು, ಪ್ರತಿ ಸಂಘಕ್ಕೆ 05 ಲಕ್ಷ ರೂಚಿತ್ರದುರ್ಗ ಜಿಲ್ಲೆಯಲ್ಲಿ 200 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ರೈತರಿಗೆ ಪಹಣಿ ಸೇರಿದಂತೆ ಹಲವು ಸೇವೆಗಳನ್ನು ನೀಡಲಾಗುವುದು. ಆರೋಗ್ಯ ಸೇವೆ ಜನರಿಗೆ ತಲುಪಿಸಲು ನಮ್ಮ ಕ್ಲಿನಿಕ್ ತೆರೆಯಲಾಗಿದೆ. ಜಿಲ್ಲೆಯ ಕೆರೆಗಳನ್ನು ತುಂಬಿಸಿ ರೈತರ ಕಣ್ಣೀರು ಒರೆಸು ಕೆಲಸ ಮಾಡಲಾಗಿದೆ. ಜಿಲ್ಲೆಯ ಸಮಗ್ರ ಅಬಿವೃದ್ಧಿಗೆ ನಮ್ಮ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.