ರೈತರಿಗೆ ಗುಡ್ ನ್ಯೂಸ್ : 'ಗಂಗಾ ಕಲ್ಯಾಣ' ನೀರಾವರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರೈತರಿಗೆ ಗುಡ್ ನ್ಯೂಸ್ : 'ಗಂಗಾ ಕಲ್ಯಾಣ' ನೀರಾವರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡುಪಿ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ನಿಗಮದ ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ಪ್ರವರ್ಗ-2ಎ ರಲ್ಲಿನ ಮಡಿವಾಳ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-22374832 ಅಥವಾ ದೂ.ಸಂಖ್ಯೆ: 0820-2574882, 8050370006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.