ರೈತರಿಗೆ ಗುಡ್‌ನ್ಯೂಸ್: ಇಂದು ನಿಮ್ಮ ಖಾತೆಗೆ ಸೇರಲಿದೆ ಪಿಎಂ ಕಿಸಾನ್ ಯೋಜನೆಯ 12 ನೇ ಕಂತಿನ ಹಣ!
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.
ಇಂದು ಸುಮಾರು 10 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ₹ 16,000 ಕೋಟಿ ರೂ.ಗಳನ್ನು ಜಮಾ ಮಾಡಲಾಗವುದು .
ದೆಹಲಿಯಲ್ಲಿ ಇಂದು ನಡೆಯುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 'ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022' ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಂತು ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಮೋದಿಯವರು 2019 ರಲ್ಲಿ ಪ್ರಾರಂಭಿಸಿದರು. ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿಯೋಗ್ಯ ಭೂಮಿಯೊಂದಿಗೆ ದೇಶಾದ್ಯಂತ ಎಲ್ಲಾ ಭೂಮಾಲೀಕ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.