ಲಂಚ ಸ್ವೀಕರಿಸುತ್ತಿದ್ದ ಚಿತ್ರದುರ್ಗದ ಬೆಳಗಟ್ಟ 'PDO' ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಚಿತ್ರದುರ್ಗದ ಬೆಳಗಟ್ಟ 'PDO' ಲೋಕಾಯುಕ್ತ ಬಲೆಗೆ

ಚಿತ್ರದುರ್ಗ : ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದ್ದು, 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಸುರೇಶ್ ಸಿಕ್ಕಿಹಾಕಿಕೊಂಡಿದ್ದಾರೆ.

ತಿಪ್ಪೇಸ್ವಾಮಿ ಎಂಬುವವರ ಬಳಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ.