ಲಕ್ನೋದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಮೂವರು ಸಾವು, 30-40 ಜನ ಅವಶೇಷಗಳಡಿ ಸಿಲುಕಿರುವ ಶಂಕೆ

ಲಕ್ನೋ : ಲಕ್ನೋದ ವಾಜಿರ್ ಹಸನ್ಗಂಜ್ ರಸ್ತೆಯಲ್ಲಿ ಮಂಗಳವಾರ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಪೊಲೀಸರು ಮತ್ತು ಎನ್ಡಿಆರ್‌ಎಫ್ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.
'ಕಟ್ಟಡವು ಇದ್ದಕ್ಕಿದ್ದಂತೆ ಕುಸಿದಿದೆ. ಮೂರು ಮೃತ ದೇಹಗಳು ಪತ್ತೆಯಾಗಿದ್ದು, ಆಸ್ಪತ್ರೆಗೆ ಕಳುಹಿಸಲಾಗಿದೆ. ಎನ್ಡಿಆರ್‌ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಎಎನ್‌ಐಗೆ ತಿಳಿಸಿದ್ದಾರೆ.
ಮಾಹಿತಿ ಪಡೆದ ನಂತರ, ಪೊಲೀಸರು ಮತ್ತು ಪರಿಹಾರ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಸುಮಾರು 30 ರಿಂದ 40 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.