ಲವ್ ಜಿಹಾದ್ ಕುರಿತು ಜಾಗೃತಿ ಅಭಿಯಾನ; ದೇವಸ್ಥಾನಕ್ಕೆ ಬಂದ ಮಹಿಳೆಯರಿಗೆ ಕರಪತ್ರ ವಿತರಿಸಿದ ಹಿಂದು ಪರ ಸಂಘಟನೆ ಕಾರ್ಯಕರ್ತರು

ಲವ್ ಜಿಹಾದ್ ಕುರಿತು ಜಾಗೃತಿ ಅಭಿಯಾನ; ದೇವಸ್ಥಾನಕ್ಕೆ ಬಂದ ಮಹಿಳೆಯರಿಗೆ ಕರಪತ್ರ ವಿತರಿಸಿದ ಹಿಂದು ಪರ ಸಂಘಟನೆ ಕಾರ್ಯಕರ್ತರು

ಬಾಗಲಕೋಟೆ: ಯುಗಾದಿ ಪಾಡ್ಯ ಹಿನ್ನೆಲೆ ದೇವಸ್ಥಾನಕ್ಕೆ ಬರುವ ಹೆಣ್ಣು ಮಕ್ಕಳಿಗೆ ಹಿಂದು ಪರ ಸಂಘಟನೆಗಳ ಯುವಕರು ಲವ್ ಜಿಹಾದ್ ಬಗ್ಗೆ ಜಾಗೃತಿ ಕರಪತ್ರ ವಿತರಣೆ ಮಾಡಿದ್ದಾರೆ. ಮಹಾಲಿಂಗಪುರದ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಜಟೋತ್ಸವ ಸಂದರ್ಭ, ಹಿಂದು ಹೆಣ್ಣು ಮಕ್ಕಳ ರಕ್ಷಣೆಗಾಗಿ ಲವ್ ಜಿಹಾದ್ ಕುರಿತು ಜಾಗೃತಿ ಅಭಿಯಾನ ಕೈಗೊಂಡಿದ್ದಾರೆ.

ವಿಶ್ವ ಹಿಂದು ಪರಿಷತ್, ಭಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ದೇವಸ್ಥಾನಕ್ಕೆ ಆಗಮಿಸುವ ಮಹಿಳೆಯರಿಗೆ ಕರಪತ್ರ ವಿತರಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯುಗಾದಿ ಪಾಡ್ಯ ನಿಮಿತ್ತ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ.

ಪ್ರತಿ ವರ್ಷ ಯುಗಾದಿ ಪಾಡ್ಯದಂದು ನಡೆಯುವ ಜಟೋತ್ಸವ ನಡೆಯುತ್ತದೆ. ಜಟ ದರ್ಶನ ಪಡೆದರೆ ಇಷ್ಟಾರ್ಥ ಈಡೇರುತ್ತದೆ. ಉತ್ತಮ ಸ್ಥಾನ ಮಾನ ಸಿಕ್ಕಿ, ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಹೀಗಾಗಿ ಪ್ರತಿ ವರ್ಷ ಸಹಸ್ರಾರು ಸಂಖ್ಯೆಯಲ್ಲಿ ಜನರು ಜಟೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.