ಲಾಡ್ಜ್‌ನಲ್ಲಿ ನೇಣಿಗೆ ಕೊರಳೊಡ್ಡಿದ ಮಂಜುನಾಥ

ಧಾರವಾಡ : ಧಾರವಾಡದ ಪಾಲಾಕ್ಷ ಲಾಡ್ಜ್‌ನಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಬೈಲಹೊಂಗಲ ತಾಲೂಕಿನ ಬಿದರಕಟ್ಟಿ ಗ್ರಾಮದ ಮಂಜುನಾಥ ನಿಂಬಾಳ್ಕರ್ (22) ಎಂಬ ಯುವಕನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ಈ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.