ಲಾರಿ ಹರಿದು ಬಾಲಕ ಸಾವು, ರೊಚ್ಚಿಗೆದ್ದ ಜನರಿಂದ ಕಲ್ಲು ತೂರಾಟ

ಲಾರಿ ಹರಿದು ಬಾಲಕ ಸಾವು, ರೊಚ್ಚಿಗೆದ್ದ ಜನರಿಂದ ಕಲ್ಲು ತೂರಾಟ

ಬೆಳಗಾವಿ,ಆ.3- ಲಾರಿ ಹರಿದು ಬಾಲಕ ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಲಾರಿಗೆ ಕಲ್ಲು ತೂರಾಟ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಅರ್ಹಾನ್ ಬೇಫಾರಿ(10) ಮೃತಪಟ್ಟ ಬಾಲಕ. ಘಟನೆಯಲ್ಲಿ ಬಾಲಕನ ಅಕ್ಕ ಹಾಗೂ ಪಾದಚಾರಿ ಗಾಯಗೊಂಡಿದ್ದು, ಇವರಿ ಬ್ಬರನ್ನು ಆಸ್ಪತ್ರೆಗೆದಾಖಲಿಸಲಾಗಿದೆ.

ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಕಬ್ಬಿಣದ ರಾಡುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ರಸ್ತೆ ದಾಟುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ನಿವಾಸಿಗಳು, ಕ್ಯಾಂಪ್ ಪ್ರದೇಶದ ನಿವಾಸಿಗಳು ಸ್ಥಳದಲ್ಲಿ ಜಮಾಯಿಸಿ ಲಾರಿಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ತಿಳಿದ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.