ಲಿಂಗಸುಗೂರಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲು

ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ವಿಸಿಬಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೇಸ್‌ಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.
ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪ್ರಾಂಶುಪಾಲನ ವಿರುದ್ಧವೇ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ.
ಲಿಂಗಸುಗೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ತನ್ನ ವಿರುದ್ಧ ಆರೋಪ ಬರದಂತೆ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಯನ್ನು ಕೊಂದು ಪ್ರಿನ್ಸಿಪಾಲ್ ನೇಣಿಗೆ ಹಾಕಿದ್ದಾರೆ ಎಂದು ಸಂಬಂಧಿಕರು, ಪೋಷಕರು ಆರೋಪಿಸಿದ್ದಾರೆ.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಲೈಂಗಿಕ ಕಿರುಕುಳ ನೀಡಿ ಪ್ರಾಂಶುಪಾಲರೇ ಕೊಲೆ ಮಾಡಿದ್ದಾರೆ. ಆಗಾಗ ವಿದ್ಯಾರ್ಥಿನಿಯನ್ನು ಪ್ರಿನ್ಸಿಪಾಲ್ ತಮ್ಮ ರೂಮಿಗೆ ಕರೆಸಿಕೊಳ್ಳುತ್ತಿದ್ದರು. ಅನುಮಾನ ಬರದಂತೆ ಹಾಸ್ಟೆಲ್ ನಲ್ಲಿ ನೇಣು ಹಾಕಿದ್ದಾರೆಂದು ಆರೋಪ ಮಾಡಲಾಗಿದೆ. ಸದ್ಯ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಸಂಬಂಧಿಕರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ