ಲೋಂಡಾ- ಬೆಳಗಾವಿ- ಘಟಪ್ರಭಾ ಡಬ್ಲಿಂಗ್ ರೈಲು ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ

ಬೆಳಗಾವಿ : ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ಬೃಹತ್ ರೋಡ್ ಶೋ ಬಳಿಕ ನಡೆದ ಕಾರ್ಯಕ್ರಮದಲ್ಲಿ ಲೋಂಡಾ- ಬೆಳಗಾವಿ- ಘಟಪ್ರಭಾ ಡಬ್ಲಿಂಗ್ ರೈಲು ಮಾರ್ಗಕ್ಕೆ ಚಾಲನೆ ನೀಡಿದ್ದಾರೆ.
ಬೆಳಗಾವಿ ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದು, ಲೋಂಡಾ- ಬೆಳಗಾವಿ- ಘಟಪ್ರಭಾ ಡಬ್ಲಿಂಗ್ ರೈಲು ಮಾರ್ಗವನ್ನು ಅವರು ದೇಶಕ್ಕೆ ಸಮರ್ಪಣೆ ಮಾಡುವರು.
ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇರವಾಗಿ ಫಲಾನುಭವಿಗಳ ಖಾತೆಗೆ ನೇರವಾಗಿ ಬಿಡುಗಡೆ/ವರ್ಗಾವಣೆ ಮಾಡಿದ್ದಾರೆ. ದೇಶದ ಒಟ್ಟು 8 ಕೋಟಿ ರೈತರ ಖಾತೆಗೆ ತಲಾ 2 ಸಾವಿರದಂತೆ 16 ಸಾವಿರ ಕೋಟಿ ರೂಪಾಯಿ. ಇದರಲ್ಲಿ ಕರ್ನಾಟಕ ರಾಜ್ಯದ 49.55 ರೈತರಿಗೆ 991 ಕೋಟಿ ರೂಪಾಯಿ ಮತ್ತು ಬೆಳಗಾವಿ ಜಿಲ್ಲೆಯ 5.10 ಲಕ್ಷ ರೈತರ ಖಾತೆಗೆ 102 ಕೋಟಿ ರೂಪಾಯಿಗಳನ್ನು ಪ್ರಧಾನಮಂತ್ರಿಗಳು ವರ್ಗಾವಣೆ ಮಾಡಿದ್ದಾರೆ.
ಜನಜೀವನ ಮಿಷನ್ ಯೋಜನೆಯಡಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 1120 ಕೋಟಿ ರೂಪಾಯಿ ವೆಚ್ಚದ ವಿವಿಧ ತಾಲ್ಲೂಕುಗಳ ಐದು ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.